Will there be a change in the PUC exam pattern?

- December 10, 2022

 ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ಆಗುತ್ತಾ?

2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿರುವ ಬೆನ್ನಲ್ಲೇ , ಸರಕಾರ ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ಮಾಡಲು ಚಿಂತನೆ ನಡೆಸಿದೆ. ಈ ಸಂಬಂಧ ಕಳೆದ ವಾರ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ , ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರಿಶೀಲನಾ ಸಭೆಯನ್ನು ನಡೆಸಿದ್ದು , ಸಭೆಯಲ್ಲಿ ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರಲು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.


ಫಲಿತಾಂಶವನ್ನು ಹೆಚ್ಚಿಸುವುದೇ ಹೊಸ ಯೋಜನೆ!

 ದ್ವಿತೀಯ ಪಿಯುಸಿ ಫಲಿತಾಂಶವನ್ನು ಕೇಂದ್ರೀಯ ಮಂಡಳಿಗಳ ಫಲಿತಾಂಶಗಳೊಂದಿಗೆ ಹೋಲಿಸಿದಾಗ ರಾಜ್ಯದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಮತ್ತು ಅಂಕಗಳ ಸಾಮರ್ಥ್ಯ ಕಡಿಮೆಯಾಗುತ್ತಿದ್ದು , ಆದುದರಿಂದ ಪಿಯುಸಿ ಪರೀಕ್ಷೆಯ ಪ್ರತಿ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ 15 ರಿಂದ 20 ಅಂಕಗಳ ಬಹು ಆಯ್ಕೆ ಪ್ರಶ್ನೆಗಳನ್ನು ಅಳವಡಿಸಲು ಯೋಜನೆಯನ್ನು ಹಾಕಿಕೊಂಡಿದೆ . ಫಲಿತಾಂಶವನ್ನು ಹೆಚ್ಚಿಸುವುದೇ ಹೊಸ ಯೋಜನೆಯ ಮೂಲ ಉದ್ದೇಶವಾಗಿದೆ ಎನ್ನಲಾಗಿದೆ .


ಬಹು ಆಯ್ಕೆಯ ಪ್ರಶ್ನೆಗಳನ್ನು ಅಳವಡಿಕೆ ಮಾಡಿದರೆ ಪಿಯು ಫಲಿತಾಂಶವು ಉತ್ತಮವಾಗಿರುತ್ತದೆ!

ಪಿಯು ಪ್ರಶ್ನೆ ಪತ್ರಿಕೆ ವಿವರಣಾತ್ಮಕ ಉತ್ತರಗಳನ್ನು ಮಾತ್ರ ಒಳಗೊಂಡಿದೆ . ಒಂದು ಅಂಕದ ಪ್ರಶ್ನೆಗೂ ವಿವರಣಾತ್ಮಕ ಉತ್ತರಗಳನ್ನು ವಿದ್ಯಾರ್ಥಿಗಳು ಬರೆಯಬೇಕಿದೆ . ಹಾಗಾಗಿ , ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುತ್ತಿದ್ದರು . ಪದವಿ ವಿದ್ಯಾಭ್ಯಾಸಕ್ಕೆ ಅರ್ಹತೆ ಪಡೆಯಲು ಪಿಯುಸಿ ಅಂಕವೇ ಭದ್ರ ಬುನಾದಿಯಾಗಿದೆ . ಹೀಗಾಗಿ ಬಹು ಆಯ್ಕೆಯ ಪ್ರಶ್ನೆಗಳನ್ನು ಅಳವಡಿಕೆ ಮಾಡಿದರೆ ಪಿಯು ಫಲಿತಾಂಶವು ಉತ್ತಮವಾಗಿ ರುತ್ತದೆ ಜೊತೆಗೆ ಪದವಿ ದಾಖಲಾತಿ ಕೂಡ ಹೆಚ್ಚುತ್ತದೆ ಎಂಬುದು ಸರಕಾರದ ಚಿಂತನೆಯಾಗಿದೆ . ಇನ್ನು ಈಗಾಗಲೇ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟವಾಗಿದ್ದು , ಮಾರ್ಚ್ 9 ರಿಂದ 29 ರ ವರೆಗೆ ಪರೀಕ್ಷೆಗಳು ನಡೆಯಲಿವೆ.



EmoticonEmoticon

 

Start typing and press Enter to search